HomeKarnatakaBIGG NEWS : ಇಂದಿನಿಂದ ಸೆ. 30ರವರೆಗೆ `ಸಬ್ ರಿಜಿಸ್ಟ್ರಾರ್ ಕಚೇರಿ' ಅವಧಿ ವಿಸ್ತರಣೆ ಮಾಡಿ...

BIGG NEWS : ಇಂದಿನಿಂದ ಸೆ. 30ರವರೆಗೆ `ಸಬ್ ರಿಜಿಸ್ಟ್ರಾರ್ ಕಚೇರಿ’ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ,  ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಸೆಪ್ಟೆಂಬರ್ 23  ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular