BIGG NEWS : ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ `ಮೊಬೈಲ್’ ಬಳಕೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕ ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪಕಟಿಸುವಂತೆ ಸೂಚಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read