HomeKarnatakaBIGG NEWS : ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ಮಾಡಿ `ಜಾತಿ ಗಣತಿ ವರದಿ ಬಗ್ಗೆ...

BIGG NEWS : ರಾಜ್ಯ ಸರ್ಕಾರ ಸಮಗ್ರ ಅಧ್ಯಯನ ಮಾಡಿ `ಜಾತಿ ಗಣತಿ ವರದಿ ಬಗ್ಗೆ ತೀರ್ಮಾನ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಬಿಹಾರ ರಾಜ್ಯದ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ ಕರ್ನಾಟಕದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿದ್ದು, ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಿಡುಗಡೆ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಕೊಟ್ಟಿದ್ದಾರೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿಗಣತಿ ವರದಿಯಲ್ಲಿ ಲಿಂಗಾಯತ, ಒಕ್ಕಲಿಗರ ಸಂಖ್ಯೆ ಕಡಿಮೆ ತೋರಿಸಲಾಗುತ್ತದೆ ಎಂಬ ಆತಂಕದಿಂದ ಕೆಲವರು ವಿರೋಧ ಮಾಡುತ್ತಿದ್ದಾರೆ. ಸಮಗ್ರ ಚರ್ಚೆ, ಅಧ್ಯಯನ ಮಾಡಿ ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಬಗ್ಗೆ ಮಹತ್ವದ ತೀರ್ಮಾನ ಮಾಡಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular