BIGG NEWS : ತೆರಿಗೆ ಸಂಗ್ರಹಕ್ಕೆ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು,  ನಿಗದಿತ ಪ್ರಮಾಣದಲ್ಲಿ ತೆರಿಗೆ ವಸೂಲಿ ಆಗದ ಕಾರಣ ಸರ್ಕಾರಕ್ಕೆ ಹೊರೆಯಾಗಿದೆ. ಹೀಗಾಗಿ, ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ.

ಆಸ್ತಿ ಖಾತೆಯನ್ನು ಬೆಂಗಳೂರಿನ ಮಾದರಿ ‘ಎ’ ಮತ್ತು ‘ಬಿ’ ಖಾತೆ ಎಂದು ವರ್ಗೀಕರಿಸುವ ನಿಯಮವನ್ನು ಎಲ್ಲ ನಗರಗಳಲ್ಲೂ ಅನುಷ್ಠಾನಗೊಳಿಸಲು ಚಿಂತನೆ ನಡೆದಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್‌ ಅವರು ಹೇಳಿದ್ದಾರೆ.

ಬಹುತೇಕ ಜಿಲ್ಲೆಗಳಲ್ಲಿ ಆಸ್ತಿ ಮತ್ತು ನೀರಿನ ಕರ ಸಾಕಷ್ಟು ಬಾಕಿ ಉಳಿದಿದೆ. ಸಕಾಲದಲ್ಲಿ ತೆರಿಗೆ ಸಂಗ್ರಹಿಸದಿದ್ದರೆ ಅಧಿಕಾರಗಳನ್ನೇ ಹೊಣೆ ಮಾಡಿ ಅಮಾನತು ಮಾಡುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಸುರೇಶ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read