BIGG NEWS: ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ : ಮೂವರು ಯುವಕರು ಅರೆಸ್ಟ್

ದಕ್ಷಿಣ ಕನ್ನಡ  : ಧರ್ಮಸ್ಥಳದಲ್ಲಿ ಇತ್ತೀಚೆಗೆ ಹಿಂದೂ ಯುವತಿಗೆ ಆಟೋದಲ್ಲಿ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮೂವರು ಯುವಕರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಬಂಧಿತರನ್ನು ಧರ್ಮಸ್ಥಳದ ಅವಿನಾಶ್ (26), ಸಂದೀಪ್ (20) ಮತ್ತು ಉಪ್ಪಿನಂಗಡಿಯ ಅಕ್ಷತ್ (22) ಎಂದು ಗುರುತಿಸಲಾಗಿದೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಗಸ್ಟ್ 2 ರಂದು ರಾತ್ರಿ 9 ಗಂಟೆ ಸುಮಾರಿಗೆ ಚಾಲಕ ಮೊಹಮ್ಮದ್ ಆಶಿಕ್ (22) ಹಿಂದೂ ಯುವತಿಯನ್ನು ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ಚಾಲಕನ ಮೇಲೆ ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಹಲ್ಲೆಯಿಂದ ಗಾಯಗೊಂಡಿದ್ದ  ಆಶಿಕ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read