HomeKarnatakaBIGG NEWS : `ನೈಸ್ ಹಗರಣ’ ವಿಚಾರ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ...

BIGG NEWS : `ನೈಸ್ ಹಗರಣ’ ವಿಚಾರ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ

ಧಾರವಾಡ : ನೈಸ್ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ದಾಖಲೆಗಳನ್ನು ಕೊಟ್ರೆ ನಾವು ಸೂಕ್ತವಾಗಿ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ನೈಸ್ ಹಗರಣದ ಬಗ್ಗೆ ದಾಖಲೆಗಳನ್ನು ನೀಡಿದ್ರೆ ನಾವು ಸೂಕ್ತವಾಗಿ ಪರಿಶೀಲನೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಯಾವುದೇ ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಹೀಗಾಗಿ ರಸ್ತೆಗಿಳಿದು ನಮ್ಮ ಶಾಸಕರು ಪ್ರತಿಭಟನೆ ಮಾಡುವಂತೆ ಕರೆ ನೀಡಿದ್ದೇವೆ. ಎಲ್ಲಿ ರಸ್ತೆ ಕೆಟ್ಟಿದೆಯೋ ಅಲ್ಲಿ ನಮ್ಮ ಶಾಸಕರು ಪ್ರತಿಭಟನೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ನೈಸ್ ರಸ್ತೆ ಮಾಡುವ ಸಂದರ್ಭದಲ್ಲಿ ರೈತರ ಜಮೀನನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದೊಂದು ದೊಡ್ಡ ಹಗರಣವಾಗಿದ್ದು, ಈ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿದ್ದೇನೆ. ನೈಸ್ ಹಗರಣದ ದಾಖಲೆಗಳನ್ನು ದೆಹಲಿಯಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular