HomeKarnatakaBIGG UPDATE : ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ : ಸಾವಿನ ಸಂಖ್ಯೆ 12 ಕ್ಕೆ...

BIGG UPDATE : ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ : ಸಾವಿನ ಸಂಖ್ಯೆ 12 ಕ್ಕೆ ಏರಿಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಸಮೀಪ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ 5ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಬೆಂಗಳೂರು –ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದ್ದು, ಅದರಿಂದ ಮೃತದೇಹಗಳನ್ನು ಹೊರತೆಗೆಯಲು, ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular