BIGG UPDATE : ಪ್ರಬಲ ಭೂಕಂಪಕ್ಕೆ ಜಪಾನ್ ತತ್ತರ : ಮೃತರ ಸಂಖ್ಯೆ 30ಕ್ಕೆ ಏರಿಕೆ |Earthquake

ಟೋಕಿಯೊ : ಜಪಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.6ರಷ್ಟಿರುವ ಪ್ರಬಲ ಸರಣಿ ಭೂಕಂಪದಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಬದುಕುಳಿದವರಿಗಾಗಿ ರಕ್ಷಣಾ ತಂಡಗಳು ಮಂಗಳವಾರ ಹರಸಾಹಸ ಪಡುತ್ತಿವೆ.

ಹೆಚ್ಚು ಹಾನಿಗೊಳಗಾದ ಇಶಿಕಾವಾ ಪ್ರಾಂತ್ಯದಲ್ಲಿ ಸರಣಿ ಕಟ್ಟಡ ಕುಸಿತದಿಂದ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.ಇಶಿಕಾವಾ ಸೋಮವಾರ 7.6 ತೀವ್ರತೆಯ ಭೂಕಂಪದ ಕೇಂದ್ರಬಿಂದುವಾಗಿತ್ತು.

ನೋಟೋ ಪರ್ಯಾಯ ದ್ವೀಪದ ತುದಿಯಲ್ಲಿರುವ ಸುಜುವಿನಲ್ಲಿ ಆರು ಜನರು ಸಾವನ್ನಪ್ಪಿದ್ದರೆ, ದಕ್ಷಿಣದಲ್ಲಿ ನಾನಾವೊದಲ್ಲಿ ಇತರ ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅವಶೇಷಗಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯ ಮುಂದುವರೆದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read