BIGG UPDATE : ಭೂಗತ ಪಾತಕಿ ‘ದಾವೂದ್ ಇಬ್ರಾಹಿಂ’ ಗೆ ವಿಷ ಪ್ರಾಶನ : ಆರೋಗ್ಯ ಸ್ಥಿತಿ ಗಂಭೀರ

ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ವಿಷಪ್ರಾಶಾನದಿಂದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಹಿಂದೆಯೇ ಖಾಯಿಲೆಯಿಂದ ಬಳಲುತ್ತಿದ್ದ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದ್ದು, ಕಳೆದ ಎರಡು ದಿನಗಳಿಂದ ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಆಸ್ಪತ್ರೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಆಪ್ತರಿಗಷ್ಟೇ ಆಸ್ಪತ್ರೆಯ ದಾವೂದ್ ಇಬ್ರಾಹಿಂ ಕೊಠಡಿಗೆ ಬಿಡಲಾಗುತ್ತಿದೆ.
ಇನ್ನೂ, ಈ ವಿಷಯ ಎಲ್ಲೂ ಹರಡದಿರಲೆಂದು ಪಾಕಿಸ್ತಾನದಾದ್ಯಂತ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read