ದೇಶದ ಇತಿಹಾಸದಲ್ಲೇ ಅಂಡಮಾನ್ ನಲ್ಲಿ ಬೃಹತ್ ಪ್ರಮಾಣದ ಡ್ರಗ್ಸ್ ಜಪ್ತಿ: 25000 ಕೋಟಿ ರೂ ಮೌಲ್ಯದ ಮಾದಕ ವಸ್ತು ವಶ

ಪೋರ್ಟ್ ಬ್ಲೇರ್: ಅಂಡಮಾನ್ ನಲ್ಲಿ ಬರೋಬ್ಬರಿ 25 ಸಾವಿರ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಇದು ದೇಶದ ಇತಿಹಾಸದಲ್ಲಿಯೇ ದೊಡ್ಡ ಬೇಟೆ ಎಂದು ಹೇಳಲಾಗಿದೆ.

ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ 500 ಕೆಜಿಯಷ್ಟು ಭಾರಿ ಪ್ರಮಾಣದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ 25,000 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ಈ ಸಂಬಂಧ ಮಯನ್ಮಾರ್ ನ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದ್ದು, ದೇಶದ ಇತಿಹಾಸದಲ್ಲಿಯೇ ಅತಿ ದೊಡ್ಡ ಮಾದಕ ದ್ರವ್ಯ ಬೇಟೆ ಇದಾಗಿದೆ ಎಂದು ಹೇಳಲಾಗಿದೆ.

ನವೆಂಬರ್ 23ರಂದು ಕರಾವಳಿ ಕಾವಲು ಪಡೆಯಲು ವಿಮಾನ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಪೋರ್ಟ್ ಬ್ಲೇರ್ ನಿಂದ ಸುಮಾರು 150 ಕಿಲೋ ಮೀಟರ್ ದೂರದಲ್ಲಿರುವ ಬ್ಯಾರನ್ ದ್ವೀಪದ ಬಳಿ ಮೀನುಗಾರಿಕೆ ಬೋಟ್ ಕಂಡುಬಂದಿದೆ. ಈ ಮಾಹಿತಿಯನ್ನು ಕರಾವಳಿ ಕಾವಲು ಪಡೆ ಕಮಾಂಡ್ ಸೆಂಟರ್ ಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬೋಟ್ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ತಲಾ 2 ಕೆಜಿ 3000 ಪ್ಯಾಕೆಟ್ ಗಳಷ್ಟು ನಿಷೇಧಿತ ಮೆಂಥಾಫೆಟಮೈನ್ ಡ್ರಗ್ಸ್ ಪತ್ತೆಯಾಗಿದೆ. ಇದರ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲಿ 25,000 ಕೋಟಿ ರೂ. ನಷ್ಟಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read