ಬಿಹಾರದಲ್ಲಿ 18 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆದರೆ, ಪ್ರಕರಣದ ಬಳಿಕ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ತೆರಳಿದ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಪೊಲೀಸ್ ಠಾಣೆಗಳ ವ್ಯಾಪ್ತಿ ವಿವಾದದ ನೆಪದಲ್ಲಿ ಎರಡು ಠಾಣೆಗಳ ಪೊಲೀಸರು ಸುಮಾರು 5 ಗಂಟೆಗಳ ಕಾಲ ಅಲೆದಾಡಿಸಿದ ಅಮಾನವೀಯ ಘಟನೆ ಕೂಡ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಚಿಕಿತ್ಸೆ ಕೊಡಿಸಲು ಯುವತಿ ಸದರ್ ಆಸ್ಪತ್ರೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಬಿಹಾರದಲ್ಲಿ 18 ವರ್ಷದ ಯುವತಿ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.. ದುರಂತವೆಂದರೆ, ಪ್ರಕರಣದ ಬಳಿಕ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ತೆರಳಿದ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಠಾಣೆ ವ್ಯಾಪ್ತಿಯ ನೆಪದಲ್ಲಿ ಸುಮಾರು 5 ಗಂಟೆಗಳ ಕಾಲ ಅಲೆದಾಡಿಸಲಾಗಿದೆ. ಪೊಲೀಸರ ಈ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್‌ಪಿ ಮಧ್ಯಪ್ರವೇಶಿಸಿದ್ದಾರೆ.
ಆಸ್ಪತ್ರೆಯಿಂದ ಹೊರಬಂದ ಬಳಿಕ ದಾರಿ ತಪ್ಪಿ ನಿರ್ಜನ ಪ್ರದೇಶವೊಂದಕ್ಕೆ ತೆರಳಿದ ಯುವತಿಯ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಬಿದ್ದಿದ್ದ ಸಂತ್ರಸ್ತೆಯನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣ ಡಯಲ್ 112 ಪೊಲೀಸರಿಗೆ ಮಾಹಿತಿ ನೀಡಿ, ಯುವತಿಯನ್ನು ರಕ್ಷಿಸಿ ಆಕೆಯ ಕುಟುಂಬದವರಿಗೆ ಒಪ್ಪಿಸಿದ್ದಾರೆ.
ನಂತರ ನ್ಯಾಯಕ್ಕಾಗಿ ಸಂತ್ರಸ್ತೆ ಹಾಗೂ ಆಕೆಯ ತಾಯಿ ಬಾಜ್‌ಪಟ್ಟಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಆದರೆ, “ಇದು ನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುತ್ತದೆ” ಎಂದು ಅಲ್ಲಿನ ಪೊಲೀಸರು ಅವರನ್ನು ವಾಪಸ್ ಕಳುಹಿಸಿದ್ದಾರೆ. ಬಳಿಕ ನಗರ ಪೊಲೀಸ್ ಠಾಣೆಗೆ ತೆರಳಿದಾಗ, “ಇದು ಬಾಜ್‌ಪಟ್ಟಿ ಠಾಣೆಯ ವ್ಯಾಪ್ತಿಗೆ ಬರುತ್ತದೆ” ಎಂದು ಅಲ್ಲಿನ ಸಿಬ್ಬಂದಿ ಕೂಡ ಪ್ರಕರಣ ದಾಖಲಿಸಲು ಮುಂದಾಗಿಲ್ಲ ಎನ್ನಲಾಗಿದೆ.
ಇದರಿಂದ ನ್ಯಾಯಕ್ಕಾಗಿ ಸಂತ್ರಸ್ತೆ ಮತ್ತು ಆಕೆಯ ತಾಯಿ ಕಣ್ಣೀರಿಡುತ್ತಾ ಸುಮಾರು 5 ಗಂಟೆಗಳ ಕಾಲ ಎರಡು ಪೊಲೀಸ್ ಠಾಣೆಗಳ ನಡುವೆ ಅಲೆದಾಡಬೇಕಾಯಿತು. ಈ ಘಟನೆಯಿಂದ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಈ ನಿರ್ಲಕ್ಷ್ಯದ ಬಗ್ಗೆ ಮಾಹಿತಿ ಪಡೆದ ಸೀತಾಮರ್ಹಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಮಿತ್ ರಂಜನ್ ತಕ್ಷಣ ಮಧ್ಯಪ್ರವೇಶಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಆದೇಶದ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ಹಾಗೂ ಅಗತ್ಯ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.
ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಅಪರಿಚಿತ ಆರೋಪಿಗಳನ್ನು ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಘಟನೆಯ ಬಳಿಕ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ಹಾಗೂ ಅಗತ್ಯ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳಿಗಾಗಿ ವಿಶೇಷ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ. ಏತನ್ಮಧ್ಯೆ, ಅತ್ಯಾಚಾರ ಸಂತ್ರಸ್ತೆಯನ್ನು ಠಾಣೆಗಳ ವ್ಯಾಪ್ತಿಯ ನೆಪದಲ್ಲಿ ಗಂಟೆಗಳ ಕಾಲ ಅಲೆದಾಡಿಸಿದ ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಆಪತ್ತಿನಲ್ಲಿರುವ ಸಂತ್ರಸ್ತರಿಗೆ ತಕ್ಷಣ ನೆರವು ಹಾಗೂ ನ್ಯಾಯ ಒದಗಿಸಬೇಕಾದ ಪೊಲೀಸರು, ಠಾಣೆಯ ವ್ಯಾಪ್ತಿಯ ನೆಪದಲ್ಲಿ ಸಂತ್ರಸ್ತೆಯನ್ನು ಗಂಟೆಗಳ ಕಾಲ ಅಲೆದಾಡಿಸಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

