BIG NEWS: ಭಾಗಲ್ಪುರದಲ್ಲಿ ಭೀಕರ ಅಗ್ನಿ ಅವಘಡ: 36ಕ್ಕೂ ಹೆಚ್ಚು ಮನೆಗಳು ಸುಟ್ಟು ಕರಕಲು

ಬಿಹಾರದ ಭಾಗಲ್ಪುರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 36ಕ್ಕೂ ಹೆಚ್ಚು ಮನೆಗಳು ಸುಟ್ಟು ಕರಕಲಾಗಿವೆ. ಹಲವರು ಸಾವನ್ನಪ್ಪಿದ್ದಾರೆ.

ಕಾಡ್ಗಿಚ್ಚಿನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ಜನರು ಮಧ್ಯಾಹ್ನ ಹೊಲದ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡದಲ್ಲಿ 36ಕ್ಕೂ ಹೆಚ್ಚು ಮನೆಗಳು ಸುಟ್ಟು ಕರಕಲಾಗಿವೆ. ಎರಡು ಹಸು, ಮೂರು ಮೇಕೆಗಳು ಸಜೀವದಹನಗೊಂಡಿವೆ.

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.

ಮೊದಲು ಬ್ರಹ್ಮದೇವ್ ಯಾದವ್ ಎಂಬುವವರ ಮನೆಗೆ ಬೆಂಕಿ ತಗುಲಿದೆ. ಬಳಿಕ ಅದು ಸುತ್ತಮುತ್ತಲಿನ ಮನೆಗಳಿಗೂ ವ್ಯಾಪಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ 36ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read