HomeIndiaಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ...

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 8ರವರೆಗೂ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಬಿಸಿಲಿನ ತಾಪ, ಬಿಸಿಗಾಳಿಯಿಂದ ಉತ್ತರ ಭಾರತದ ಜನ ತತ್ತರಿಸಿ ಹೋಗಿದ್ದು, ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿ, ಗುಜರಾತ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳ ಸೇರಿ ಹಲವು ಕಡೆಗಳಲ್ಲಿ ತಾಪಮಾನ ಏರಿಕೆ ಕಂಡಿದೆ, ಉತ್ತರ ಭಾರತದ ಅನೇಕ ಕಡೆ 50 ಡಿಗ್ರಿಗೂ ಅಧಿಕ ತಾಪಮಾನ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular