HomeLatest NewsSHOCKING: ವಾಮಾಚಾರ ಶಂಕೆಯಿಂದ ಕ್ರೂರವಾಗಿ ಥಳಿಸಿ ಒಂದೇ ಕುಟುಂಬದ ಐವರ ಸಜೀವದಹನ: ಬೆಚ್ಚಿಬಿದ್ದ ಬಿಹಾರ

SHOCKING: ವಾಮಾಚಾರ ಶಂಕೆಯಿಂದ ಕ್ರೂರವಾಗಿ ಥಳಿಸಿ ಒಂದೇ ಕುಟುಂಬದ ಐವರ ಸಜೀವದಹನ: ಬೆಚ್ಚಿಬಿದ್ದ ಬಿಹಾರ

ಪಾಟ್ನಾ: ಬಿಹಾರದ ಪೂರ್ಣಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಟ್ಗಾಮಾ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಾಮಾಚಾರದ ಆರೋಪದ ಮೇಲೆ ಒಂದೇ ಕುಟುಂಬದ ಐವರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಲಾಗಿದೆ.

ಈ ಭೀಕರ ಕೊಲೆ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಎಲ್ಲಾ ಆರೋಪಿಗಳು ಗ್ರಾಮದಿಂದ ಪರಾರಿಯಾಗಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕುತ್ತಿದ್ದಾರೆ.

ಮೃತರನ್ನು ಬಾಬು ಲಾಲ್ ಒರಾನ್, ಸೀತಾ ದೇವಿ, ಮಂಜೀತ್ ಒರಾನ್, ರಾನಿಯಾ ದೇವಿ ಮತ್ತು ತಪ್ಟೋ ಮೊಸಾಮತ್ ಎಂದು ಗುರುತಿಸಲಾಗಿದ್ದು, ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಘಟನೆಯ ನಂತರ, ಆ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅನೇಕ ಗ್ರಾಮಸ್ಥರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಪೊಲೀಸರು ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದಾರೆ ಮತ್ತು ಎಫ್‌ಎಸ್‌ಎಲ್ ತಂಡದೊಂದಿಗೆ ಶ್ವಾನ ದಳವು ತನಿಖೆ ನಡೆಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ನಕುಲ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಕುಟುಂಬದವರನ್ನು ಜೀವಂತವಾಗಿ ಸುಡುವಂತೆ ನಕುಲ್ ಪ್ರಚೋದಿಸಿದ ಆರೋಪ ಹೊರಿಸಲಾಗಿದೆ.

ಮೃತರ ಕುಟುಂಬದ ಏಕೈಕ ಸದಸ್ಯ ಲಲಿತ್ ಭಯಾನಕ ಘಟನೆಯನ್ನು ವಿವರಿಸಿದ್ದು, ತನ್ನ ಇಡೀ ಕುಟುಂಬವನ್ನು ಮೊದಲು ಮಾಟಗಾರಾರರು ಎಂಬ ಆರೋಪದ ಮೇಲೆ ನಿರ್ದಯವಾಗಿ ಥಳಿಸಲಾಯಿತು, ನಂತರ ಬೆಂಕಿ ಹಚ್ಚುವ ಮೊದಲು ಹೊಡೆದು ಕೊಂದರು. ಸುಟ್ಟ ನಂತರ, ಶವಗಳನ್ನು ನೀರಿಗೆ ಎಸೆಯಲಾಯಿತು. ಹೇಗೋ, ನಾನು ನನ್ನ ಪ್ರಾಣವನ್ನು ಉಳಿಸಿಕೊಂಡೆ ಎಂದು ಘಟನೆಯಿಂದ ಆಘಾತಕ್ಕೊಳಗಾದ ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular