BREAKING: ವಾಹನ ಡಿಕ್ಕಿಯಾಗಿ ನಾಲ್ವರು ಯಾತ್ರಿಕರು ಸಾವು: ಉದ್ರಿಕ್ತರಿಂದ ಪೊಲೀಸ್ ಜೀಪ್ ಗೆ ಬೆಂಕಿ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಫುಲ್ಲಿಡುಮಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರ್ದಿಹ್ ಗ್ರಾಮದಲ್ಲಿ ಶುಕ್ರವಾರ ವೇಗವಾಗಿ ಬಂದ SUV ಡಿಕ್ಕಿ ಹೊಡೆದ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಸ್‌ಡಿಪಿಒ ಬಿಪಿನ್ ಬಿಹಾರಿ, ಅಪಘಾತದಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಸ್ವಲ್ಪ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಂತರ ಪರಿಸ್ಥಿತಿ ತಿಳಿಯಾಗಿದೆ. ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ.

ಫುಲ್ಲಿಡುಮಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಬಬ್ಲು ಕುಮಾರ್ ಅಪಘಾತವನ್ನು ಖಚಿತಪಡಿಸಿದ್ದು, ಅಪಘಾತದ ನಂತರ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ನಮಗೆ ಮಾಹಿತಿ ಬಂದ ತಕ್ಷಣ, ನಾವು ಸ್ಥಳಕ್ಕೆ ಧಾವಿಸಿ ಗಾಯಗೊಂಡ ವ್ಯಕ್ತಿಗಳನ್ನು ರಕ್ಷಿಸಿದ್ದೇವೆ. ಅವರನ್ನು ಸದರ್ ಆಸ್ಪತ್ರೆ ಬಂಕಾಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಚಾಲಕ ಮತ್ತು ವಾಹನವನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ.

ಅಪಘಾತದ ನಂತರ, ಸ್ಥಳದಲ್ಲಿ ಹೆಚ್ಚಿನ ಜನರು ಜಮಾಯಿಸಿದ್ದರು. ಮೊದಲ ಪ್ರತಿಸ್ಪಂದಕ ಪೊಲೀಸ್ ಕಂಟ್ರೋಲ್ ರೂಮ್ ವೆಹಿಕಲ್(DIAL 112) ಗಾಯಗೊಂಡವರಿಗೆ ಸಹಾಯ ಮಾಡಲು ಆಗಮಿಸಿದಾಗ, ಅಪಘಾತದ ಬಗ್ಗೆ ಕೋಪಗೊಂಡ ಜನಸಮೂಹವು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿತು. ಘರ್ಷಣೆಯ ಸಂದರ್ಭದಲ್ಲಿ ಗುಂಪು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿತು, ಕೆಲವು ಅಧಿಕಾರಿಗಳು ಗಾಯಗೊಂಡಿದ್ದಾರೆ. ಹೆಚ್ಚಿನ ಪೊಲೀಸ್ ಪಡೆಯನ್ನು ಸ್ಥಳಕ್ಕೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ. ಅಪಘಾತವೆಸಗಿದ ಚಾಲಕನನ್ನು ಬಂಧಿಸಲಾಗುವುದು ಎಂದು ಬಬ್ಲುಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read