ತವರಿನಿಂದ ಪತ್ನಿ ಬರಲಿಲ್ಲವೆಂದು ಪತಿಯಿಂದ ಖಾಸಗಿ ಅಂಗಕ್ಕೆ ಕತ್ತರಿ…!

ಬಿಹಾರದ ವ್ಯಕ್ತಿಯೊಬ್ಬ ತನ್ನ ಪತ್ನಿ ತವರು ಮನೆಯಲ್ಲೇ ಉಳಿದುಕೊಂಡಿದ್ದಾಳೆಂದು ಬೇಸತ್ತು ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡಿದ್ದಾನೆ.

ಶುಕ್ರವಾರ ರಾತ್ರಿ ಬಿಹಾರದ ಮಾಧೇಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಜನಿ ನಯಾನಗರ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ.

ಮಹೇಂದ್ರ ಬಾಸುಕಿ ಅವರ ಪುತ್ರ ಕೃಷ್ಣ ಬಾಸುಕಿ (25) ಎಂದು ಗುರುತಿಸಲಾದ ವ್ಯಕ್ತಿಯನ್ನು ಗೋಲ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಮಲೋಧ್ ವಾರ್ಡ್ 6ರ ನಿವಾಸಿ ಛೋಟೆ ಲಾಲ್ ಬಸುಕಿ ಅವರ ಪುತ್ರಿ ಅನಿತಾರನ್ನು ವಿವಾಹವಾಗಿದ್ದಾರೆ. ದಂಪತಿಗೆ ಮೂವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿದಂತೆ ನಾಲ್ವರು ಮಕ್ಕಳಿದ್ದಾರೆ.

ಮೂಲಗಳ ಪ್ರಕಾರ, ಕೃಷ್ಣ ಪಂಜಾಬ್‌ನ ಮಂಡಿಯಲ್ಲಿ ವಾಸಿಸುತ್ತಿದ್ದು ಅಲ್ಲೇ ಕೆಲಸ ಮಾಡುತ್ತಿದ್ದಾರೆ. ಎರಡು ತಿಂಗಳ ಹಿಂದೆ ತಮ್ಮ ಕುಟುಂಬವನ್ನು ಭೇಟಿ ಮಾಡಲು ಬಂದಿದ್ದರು. ಈ ವೇಳೆ ಆತನ ಪತ್ನಿ ಅನಿತಾ ತವರು ಮನೆಗೆ ಹೋಗಿದ್ದವಳು ವಾಪಸ್ ಬಂದಿರಲಿಲ್ಲ. ಇದಕ್ಕೆ ಕೋಪಗೊಂಡ ಕೃಷ್ಣ ತನ್ನ ಖಾಸಗಿ ಅಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿಕೊಂಡಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವನನ್ನು ಕಂಡ ಸಂಬಂಧಿಕರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೃಷ್ಣ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಕೆಲವು ಮೂಲಗಳು ಹೇಳಿವೆ. ಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಡಾ. ಸುಕೇಶ್ ಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read