SHOCKING: ಪೂಜೆಗಾಗಿ ಎಲೆ ತರಲು ಹೋದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಬಾಳೆಮರದ ಬಳಿ ಅರೆಬೆತ್ತಲೆ ಶವ ಪತ್ತೆ

ಪಾಟ್ನಾ: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರು ಎನ್‌ಹೆಚ್ 55 ಅನ್ನು ತಡೆದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು. ಸಂತ್ರಸ್ತೆ ಗೋವರ್ಧನ ಪೂಜೆಗೆ ಬಾಳೆ ಎಲೆ ತರಲು ಸಮೀಪದ ತೋಟಕ್ಕೆ ತೆರಳಿದ್ದಳು.

ಆಕೆಯ ಮೃತದೇಹವು ಬಾಳೆಮರದ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂತ್ರಸ್ತೆ ದೀಪಾವಳಿಗೆ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಗ್ರಾಮವು ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.

ಆಕೆಯನ್ನು ಒಬ್ಬಳೇ ನೋಡಿದ ಆರೋಪಿಗಳು ಆಕೆಯನ್ನು ಅಡ್ಡಗಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಾವು ಸ್ಥಳದಿಂದ ಸಂತ್ರಸ್ತೆಯ ಒಳ ಉಡುಪುಗಳನ್ನು ಕಂಡುಕೊಂಡಿದ್ದೇವೆ. ಅಪರಾಧ ಮಾಡಿದ ನಂತರ, ಆರೋಪಿಗಳು ಆಕೆಯ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಮುಫಾಸಿಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಕ್ಷ್ಯಗಳನ್ನು ಸಂಗ್ರಹಿಸಲು ನಾವು ಎಫ್‌ಎಸ್‌ಎಲ್ ತಂಡವನ್ನು ಕರೆದಿದ್ದೇವೆ. ಅಪರಿಚಿತ ವ್ಯಕ್ತಿಯ ವಿರುದ್ಧ ಕೊಲೆ ಮತ್ತು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read