HomeCrimeShocking: ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

Shocking: ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಕೇವಲ ಹತ್ತು ದಿನಗಳ ಹಿಂದಷ್ಟೇ ಪೊಲೀಸ್ ಅಧಿಕಾರಿಯನ್ನು ವಿವಾಹವಾಗಿದ್ದ ನವ ವಿವಾಹಿತೆ ತನ್ನ ಮನೆ ಮುಂದೆ ಕುಳಿತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇಂಥದೊಂದು ಘಟನೆ ಬಿಹಾರದಲ್ಲಿ ನಡೆದಿದೆ.

23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ. ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿಲ್ಲ.

ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ತಿಕ್ ಮಂಡಲ್ ಎಂಬವರನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಇವರಿಬ್ಬರು 10 ದಿನಗಳ ಹಿಂದಷ್ಟೇ ವಿವಾಹವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಈ ಮದುವೆ ಕಾರ್ತಿಕ್ ತಾಯಿಗೆ ಇಷ್ಟವಿರಲಿಲ್ಲವೆಂದು ಹೇಳಲಾಗಿದ್ದು, ಜೊತೆಗೆ ಮದುವೆ ಸಂದರ್ಭದಲ್ಲಿ 5 ಲಕ್ಷ ರೂಪಾಯಿ ವರದಕ್ಷಿಣೆ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೃತ ಯುವತಿಯ ಕುಟುಂಬಸ್ಥರು ಆಕೆಯ ಅತ್ತೆಯ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular