HomeLatest Newsವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಬಳಸಿ ಹೆದರಿಸಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಬಳಸಿ ಹೆದರಿಸಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಸ್ಪೆಂಡ್

ಪಾಟ್ನಾ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಓರ್ವ AK-47 ಮೂಲಕ ಗುಂಡು ಹಾರಿಸಿ ಬೆದರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಸ್ ಟೇಬಲ್ ನನ್ನು ಅಮಾನತುಗೊಳಿಸಲಾಗಿದೆ.

ನೀಟ್ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜುಲೈ 25ರಂದು ಬಿಹಾರ್ ಬಂದ್ ನಡೆಸಲಾಗಿತ್ತು. ಸಿವಾನ್ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸ್ ಪೇದೆಯೊಬ್ಬ AK-47 ರೈಫಲ್ ಹಿಡಿದು ಓಡಾಡಿದ್ದಲ್ಲದೇ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ವರದಿಗಳ ಪ್ರಕಾರ, ಪ್ರತಿಭಟನೆ ವೇಳೆ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ಪಾಟ್ನಾದ ಜಯಪ್ರಭಾ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ. ಗಾಯಾಳುಗಳಲ್ಲಿ 15 ವರ್ಷದ ಎಂಡಿ ಆರಿಫ್ ಎಂಬ ಬಾಲಕ ಸಹ ಸೇರಿದ್ದಾನೆ. ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈತ, ಪ್ರತಿಭಟನೆ ಸಮಯದಲ್ಲಿ ಅಂಗಡಿ ಮುಚ್ಚಿ ಮನೆಗೆ ಹಿಂತಿರುಗುತ್ತಿದ್ದಾಗ ಈತನ ಕುತ್ತಿಗೆಗೆ ಗುಂಡು ತಗುಲಿದೆ. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯರು ಗುಂಡನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಇನ್ನು ರಾಜ್ಯದ ಹಲವೆಡೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ್ದರು. ಒಂದೆಡೆ ಲಾಠಿಚಾರ್ಜ್, ಮತ್ತೊಂದೆಡೆ AK-47 ರೈಫಲ್ ಹಿಡಿದು ಪ್ರತಿಭಟನಾಕಾರರ ಮೇಲೆ ಗುರಿ ಇಟ್ಟು ಓಡಾಡುತ್ತಿರುವ ಪೊಲೀಸರ ದೃಶ್ಯ ಭಾರಿ ವೈರಲ್ ಆಗಿತ್ತು. ಪೊಲೀಸರ ನಡೆ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಲೋಕಸಭೆ ವಿಪಕ್ಷನಾಯಕ ರಾಅಹುಲ್ ಗಾಂಧಿ, ಬಿಹಾರ ವಿಪಕ್ಷ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಹಲವು ನಾಯಕರು ಪೊಲೀಸರ ಕ್ರಮವನ್ನು ಕಹ್ಂಡಿಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಬಳಸಿದ ಘಟನೆಯನ್ನು ಗಂಭೀರವಗೈ ಪರಿಗಣಿಸಿದ ಪೊಲೀಸ್ ಇಲಾಖೆ ತಕ್ಷಣ ಆ ಕಾನ್ಸ್ ಟೇಬಲ್ ನನ್ನು ಅಮಾನತುಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular