ಬಿಹಾರದಲ್ಲಿ ಸಿಡಿಲು ಬಡಿದು 6 ಮಂದಿ ಸಾವು: 7 ದಿನದಲ್ಲಿ 26 ಮಂದಿ ಸಿಡಿಲಿಗೆ ಬಲಿ: ಸಿಎಂ ನಿತೀಶ್ ಕುಮಾರ್ ಪರಿಹಾರ ಘೋಷಣೆ

ಪಾಟ್ನಾ: ಬಿಹಾರದಲ್ಲಿ ಸಿಡಿಲು ಬಡಿದು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ನವಾಡ ಜಿಲ್ಲೆಯಲ್ಲಿ ಸಿಡಿಲಿನಿಂದ 6 ಜನ ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಆರು ಮಂದಿ ಸಾವನ್ನಪ್ಪಿರುವ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದಕ್ಕೂ ಮುನ್ನ, ಆಗಸ್ಟ್ 2 ರಂದು ಕಳೆದ ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಎಂಟು ಜನರು ಸಾವನ್ನಪ್ಪಿದ್ದರು. ಆ.1 ರಂದು ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು 12 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯ ರಾಜಧಾನಿ ಪಾಟ್ನಾ ಮತ್ತು ಔರಂಗಾಬಾದ್‌ನಲ್ಲಿ ತಲಾ ಮೂರು ಸಾವುಗಳು ವರದಿಯಾಗಿವೆ. ನವಾಡ ಮತ್ತು ಸರನ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ನಂತರ ಮುಖ್ಯಮಂತ್ರಿ ಕಚೇರಿ(CMO) ತಿಳಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಜನರು ಅನುಸರಿಸುವಂತೆ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read