HomeIndiaಯೋಧನನ್ನು ಕಾರಿನೊಳಗೆ ಕೂಡಿಹಾಕಿ ಬೆಂಕಿ ಹಚ್ಚಿ ಕೊಲೆಗೈದ ದುಷ್ಕರ್ಮಿಗಳು: ಮೂವರು ಆರೋಪಿಗಳು ಅರೆಸ್ಟ್

ಯೋಧನನ್ನು ಕಾರಿನೊಳಗೆ ಕೂಡಿಹಾಕಿ ಬೆಂಕಿ ಹಚ್ಚಿ ಕೊಲೆಗೈದ ದುಷ್ಕರ್ಮಿಗಳು: ಮೂವರು ಆರೋಪಿಗಳು ಅರೆಸ್ಟ್

ಕೈಮೂರ್: ದುಷ್ಕರ್ಮಿಗಳು ಯೋಧರೊಬ್ಬರನ್ನು ಕಾರಿನೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆಗೈದಿರುವ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.

ಬಿಹಾರದ ಕೈಮೂರ್ ಜಿಲ್ಲೆಯ ರಾಮಗಢ ಪೊಲೀಸ್ ಠಾಣಾ ವ್ಯಾಪ್ತಿಯ ಸಾಹುಕಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯೋಧ ಶತ್ರುಧನ್ ಯಾದವ್ ಕೊಲೆಯಾದ ಸೈನಿಕ. ಗಂಭೀರವಾಗಿ ಸುಟ್ಟಗಾಯಗಳಿಂದ ನರಳುತ್ತಿದ್ದ ಶತ್ರುಧನ್ ಅವರನ್ನು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯೋಧನ ಸಾವಿನಿಂದ ಆಕ್ರೋಶಗೊಂಡ ಗ್ರಾಮಸ್ಥರು ದುರ್ಗಾ ಚೌಕ್‌ನಲ್ಲಿ ಬರೋಬ್ಬರಿ ಐದು ಗಂಟೆಗಳ ಕಾಲ ರಸ್ತೆ ತಡೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಹಣಕಾಸಿನ ವ್ಯವಹಾರ ಬಗೆಹರಿಸಿಕೊಳ್ಳಲು ಮಾತುಕತೆಗೆಂದು ಶತ್ರುಧನ್ ಯಾದವ್ ಅವರನ್ನು ರಾಮಗಢಕ್ಕೆ ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳು, ಅವರನ್ನು ಸ್ಕಾರ್ಪಿಯೋ ಕಾರಿನೊಳಗೆ ಕೂಡಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು.

ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದ ಯೋಧನನ್ನು ಮೊದಲು ವಾರಣಾಸಿಯ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿತ್ತು. ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಯೋಧನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು ದುರ್ಗಾ ಚೌಕ್‌ನಲ್ಲಿ ರಸ್ತೆ ತಡೆ ನಡೆಸಿ, ಟೈರ್ ಸುಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ರಾಮಗಢ ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಎಸ್ಪಿ ಶಿಖರ್ ಚೌಧರಿ, ಎಸ್‌ಡಿಎಂ ಹಾಗೂ ಡಿಎಸ್‌ಪಿ ಪ್ರತಿಭಟನಾಕಾರರ ಮನವೊಲಿಸಿದರು. ಪ್ರಕರಣದಲ್ಲಿ ಒಟ್ಟು 7 ಜನರನ್ನು ಆರೋಪಿಗಳನ್ನಾಗಿ ಗುರುತಿಸಲಾಗಿದ್ದು, ಈಗಾಗಲೇ ಮೂವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಉಳಿದ ನಾಲ್ವರಿಗಾಗಿ ಶೋಧ ನಡೆಯುತ್ತಿದೆ ಮತ್ತು ಸ್ಥಳೀಯ ಎಸ್‌ಎಚ್‌ಒ ಪಾತ್ರದ ಬಗ್ಗೆಯೂ ತನಿಖೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದಾಅರೆ. ಇದರಿಂದಾಗಿ ಪ್ರತಿಭಟನೆಯನ್ನು ಗ್ರಾಅಮಸ್ಥರು ಹಿಂಪಡೆದಿದ್ದಾರೆ.

ಈ ಪ್ರಕರಣದಲ್ಲಿ ಈ ಹಿಂದೆ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದ್ದು, ಯೋಧನ ಸಾವಿನ ನಂತರ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಮಾರ್ಪಡಿಸಲಾಗಿದೆ. ಯೋಧ ಶತ್ರುಧನ್ ಯಾದವ್ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಯ ನಂತರ ಅವರ ಸ್ವಗ್ರಾಮ ಸಾಹುಕಾಗೆ ತರಲಾಗುತ್ತಿದ್ದು, ಸೇನಾ ಗೌರವ ಹಾಗೂ ಸಾರ್ವಜನಿಕರ ಅಂತಿಮ ನಮನಗಳೊಂದಿಗೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

ಘಟನೆ ಬಳಿಕ ಗ್ರಾಮದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂದದಂತಿದೆ. ಮತ್ತೆ ಪ್ರೈಭಟನೆಗಳು, ಸಂಘರ್ಷಗಳು ಭುಗಿಲೇಳುವ ಸಾಧ್ಯತೆ ಇರುವುದರಿಂದ ರಾಮಗಢ ಪಟ್ಟಣ ಮತ್ತು ಸಾಹುಕಾ ಗ್ರಾಮದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular