
ರಘುನಾಥ್ಪುರ ನಿಲ್ದಾಣದ ಬಳಿ ರೈಲಿನ ಆರು ಬೋಗಿಗಳು ಹಳಿ ತಪ್ಪಿದ ಪರಿಣಾಮ 70 ಮಂದಿ ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸ್ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರೈಲ್ವೆ ಇಲಾಖೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದೆ. ಅಪಘಾತ ಸಂಭವಿಸಿದಾಗ ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಲು ಧಾವಿಸಿದ್ದಾರೆ. ಮತ್ತು ಹಳಿ ತಪ್ಪಿದ ಬೋಗಿಗಳಿಂದ ಹೊರಬರಲು ಸಹಾಯ ಮಾಡಿದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಹಲವಾರು ಪೊಲೀಸ್ ಅಧಿಕಾರಿಗಳು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದರು.

