HomeLatest NewsBREAKING: ನಿಲ್ಲಿಸಿದ್ದ ಕಾರ್ ನೊಳಗೆ ಇಬ್ಬರು ಮಕ್ಕಳ ಮೃತದೇಹ ಪತ್ತೆ

BREAKING: ನಿಲ್ಲಿಸಿದ್ದ ಕಾರ್ ನೊಳಗೆ ಇಬ್ಬರು ಮಕ್ಕಳ ಮೃತದೇಹ ಪತ್ತೆ

ಪಾಟ್ನಾ: ಪಾಟ್ನಾದ ಇಂದ್ರಪುರಿ ಪ್ರದೇಶದಲ್ಲಿ ನಡೆದ ದುರಂತ ಘಟನೆಯಲ್ಲಿ ನಿಲ್ಲಿಸಿದ್ದ ಕಾರ್ ನೊಳಗೆ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.

ಬಾಲಕಿ ಮತ್ತು ಬಾಲಕನ ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಸಮಗ್ರ ತನಿಖೆ ಆರಂಭಿಸಲಾಗಿದೆ. ಬಾಲಕಿಗೆ ಸುಮಾರು ಒಂಬತ್ತು ವರ್ಷ ಮತ್ತು ಬಾಲಕನಿಗೆ ಸುಮಾರು ಐದು ವರ್ಷವಾಗಿದೆ.

ಇಂದ್ರಪುರಿ ಪ್ರದೇಶದಲ್ಲಿ ಕಾರ್ ನೊಳಗೆ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ ಶವಗಳನ್ನು ವಶಪಡಿಸಿಕೊಂಡಿದ್ದಾರೆ. ಮಕ್ಕಳ ಗುರುತನ್ನು ಕಂಡುಹಿಡಿಯಲು ಅವರು ಪ್ರಯತ್ನಿಸುತ್ತಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಬಹುದು ಎಂದು ಪಾಟ್ನಾ(ಕೇಂದ್ರ) ಎಸ್‌ಪಿ ದೀಕ್ಷಾ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular