ಪಾಟ್ನಾ: ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಬಿಹಾರದಲ್ಲಿ ಮತ್ತೋರ್ವ ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಸುರೇಂದ್ರ ಕೇವತ್ (52) ಹತ್ಯೆಯಾದ ಬಿಜೆಪಿ ನಾಯಕ. ಶೇಕ್ ಪುರದಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುರೇಂದ್ರ ಕೇವತ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸುರೇಂದ್ರ ಅವರಿಗೆ ನಾಲ್ಕು ಗುಂಡುಗಳು ತಗುಲಿವೆ. ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುರೇಂದ್ರ ಕೇವತ್ ಕೊನೆಯುಸಿರೆಳೆದಿದ್ದಾರೆ. ಬಿಹಾರದಲ್ಲಿ ಎರಡು ವಾರಗಳ ಅಂತರದಲ್ಲಿ ಇಬ್ಬರು ಬಿಜೆಪಿ ನಾಯಕರ ಅಹತ್ಯೆಯಾಗಿದೆ.