HomeIndiaBREAKING NEWS: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ; ಸಂಜೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ...

BREAKING NEWS: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ; ಸಂಜೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಯು ಹಾಗೂ ಆರ್ ಜೆಡಿ ಮೈತ್ರಿಯಲ್ಲಿ ಬಿರುಕು ಮೂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೋಟದ ಜೊತೆ ಕೈ ಜೋಡಿಸಲು ಮುಂದಾಗಿದ್ದು, ಇಂದು ಸಂಜೆ 7 ಗಂಟೆಗೆ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಅಲ್ಲದೇ ಎನ್ ಡಿಎ ಬೆಂಬಲದೊಂದಿಗೆ ನಾಳೆ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಯು ನಾಯಕರು ನಿತೀಶ್ ಕುಮಾರ್ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ್ತೊಂದೆಡೆ ಆರ್ ಜೆಡಿ ಹಾಗೂ ಕಾಂಗ್ರೆಸ್ ತಮ್ಮ ಶಾಸಕರ ಸಭೆ ಕರೆದಿವೆ. ಒಟ್ಟಾರೆ ಬಿಹಾರ ರಾಜಕೀಯ ಬೆಳವಣಿಗೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular