HomeLatest NewsBIG NEWS: ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರ ಹಣ ವಸೂಲಿ: ಸಂಸದ ಬಿ.ವೈ.ರಾಘವೇಂದ್ರ ಗಂಭೀರ...

BIG NEWS: ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರ ಹಣ ವಸೂಲಿ: ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ

ಶಿವಮೊಗ್ಗ: ಬಿಹಾರ ಚುನಾವಣೆ ಹೆಸರಲ್ಲಿ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಸಚಿವ ಸಂಪುಟದ ಸಚಿವರು ಬಿಹಾರ ಚುನಾವಣೆಗೆ ಫಂಡ್ ಕಳುಹಿಸಲು ಅಧಿಕಾರಿಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಸಚಿವರ ವಸೂಲಿಗೆ ಬೆಸತ್ತ ಅಧಿಕಾರಿಗಳು ನಮ್ಮೆದುರು ಬಂದು ಕಣ್ಣೀರು ಹಾಕುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಅಂತಾ ಎಲ್ಲಾ ಇಲಾಖೆಗಳ ಸಚಿವರು ವಸೂಲಿ ಮಾಡಿ ಬಿಹಾರ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ ಇದೊಂದು ದಂಧೆಯಾಗಿದೆ. ಅದು ಬಿಹಾರಕ್ಕೆ ತಲುಪಲ್ಲ. ಅದು ಎಲ್ಲಿ ತಲುಪಬೇಕೋ ಅಲ್ಲಿ ತಲುಪತ್ತದೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular