ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ 18 ಅಭ್ಯರ್ಥಿಗಳ ಕೊನೇ ಪಟ್ಟಿ ಬಿಡುಗಡೆ ಮಾಡಿದೆ.
ಈ ಮೂಲಕ ಬಿಜೆಪಿ ಬಿಹಾರ ಚುನಾವಣೆಗೆ ಒಟ್ಟು 101 ಅಭ್ಯರ್ಥಿಗಳ ಪಟ್ಟಿಯನ್ನು ಮೂರು ಹಂತಗಳಲ್ಲಿ ಬಿಡಿಗಡೆ ಮಾಡಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರು ಘೋಷಿಸಿತ್ತು. ಎರಡನೇ ಪಟ್ಟಿಯಲ್ಲಿ 12 ಅಭ್ಯರ್ಥಿಗಳ ಹೆಸರು ಘೋಷಿಸಿತ್ತು. ಇದೀಗ ಮೂರನೇ ಹಾಗೂ ಕೊನೇ ಪಟ್ಟಿ ಪ್ರಕಟಿಸಿದ್ದು, 18 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಅವುಗಳಲ್ಲಿ 17 ಹಾಲಿ ಶಾಸಕರಿಗೆ ಟಿಕೆಟ್ ನೀಡಿದೆ.