ಪಾಟ್ನಾ: ಬಿಹಾರ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಎನ್ ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಎನ್ ಡಿಎ 207 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮುನ್ನಡೆ ಕಾಯ್ದುಕೊಂಡಿದೆ.
ಈ ನಡುವೆ ಬಿಹಾರದ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಜೆಡಿಯು, ಬಿಹಾರ ಚುನಾವಣೆಯಲ್ಲಿ ಜೆಡಿಯು ಅದ್ಭುತ ಪ್ರದರ್ಶನ ನೀಡಿದೆ. ಪಕ್ಷವು 82 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಫಲಿತಾಂಶ ಹರ್ಷ ತಂದಿದೆ. ನಿತೀಶ್ ಕುಮಾರ್ ಅವರೇ ಬಿಹರದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ತಿಳಿಸಿದೆ.
