ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ಧಾಪುಗಾಲಿಟ್ಟಿದೆ. ಈಗಾಗಲೇ ಎನ್ ಡಿಎ ೨೦೩ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
ಬಿಹಾರದಲ್ಲಿ ಎನ್ ಡಿಎ ಗೆಲುವು ಖಚಿತವಾಗುತ್ತಿದ್ದಂತೆ ಕಾರ್ಯಕರ್ತರಲ್ಲಿ ಸಂಭ್ರಮ, ಸಡಗರ ಮನೆ ಮಾಡಿದೆ. ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತುದ್ದಾರೆ.
ಬಿಹಾರದಲ್ಲಿ ಎನ್ ಡಿಎ ಗೆಲುವು ಖಚಿತ ಹಿನ್ನೆಲೆಯಲ್ಲಿ ಪ್ರಧಾಅನಿ ನರೇಂದ್ರ ಮೋದಿ ಇಂದು ಸಂಜೆ ಎನ್ ಡಿಎ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
