BIG NEWS: ಬಿಹಾರದಲ್ಲಿಯೂ ಮತಗಳುವು ನಡೆದಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಹಾರದಲ್ಲಿಯೂ ಮತಗಳು ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಬಹುಮತ ಪಡೆದು ಗೆಲುವಿನತ್ತ ಧಾಪುಗಾಲಿಡುತ್ತಿದೆ. ಮತ್ತೊಂದೆಡೆ ಮಹಾಘಟಬಂಧನ ಮೈತ್ರಿಕೂಟ ತೀವ್ರ ಮುಖಭಂಗ ಅನುಭವಿಸಿದೆ. ಬಿಹಾರದಲ್ಲಿ ಕಾಂಗ್ರೆಸ್-ಆರ್.ಜೆಡಿ ಮೈತ್ರಿಗೆ ಭಾರಿ ಹಿನ್ನಡೆಯಾಗಿದೆ.

ಬಿಹರ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಜನಾದೇಶವನ್ನು ನಾವು ಒಪ್ಪಿಕೊಳ್ಳಬೇಕು. ಈ ಹಿನ್ನಡೆಗೆ ಕಾರಣವೇನೆಂದು ಗೊತ್ತಿಲ್ಲ. ನಾನು ಬಿಹಾರಕ್ಕೆ ಹೋಗಿಲ್ಲ. ಎನ್ ಡಿಎ ಗೆ ಭಾರಿ ಬಹುಮತ ದೊರೆಯಲು ಕಾರಣ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ಇನ್ನು ಬಿಹಾರ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳುವು ಆಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read