ಪಾಟ್ನಾ: ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನ ನೀಡುವ ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆಯಾಗಿದ್ದು, ಗೊತ್ತಾಗದೇ ಬಿಸಿಯೂಟ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ ಸಹರ್ಸಾ ಜಿಲ್ಲೆಯ ಸರ್ಕಾರಿ ಶಾಅಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಬಿಸಿಯೂಟ ಸೇವಿಸಿದ 250 ಮಕ್ಕಳು ತೀವ್ರ ಅಸ್ವಸ್ಥರಾಗಿದ್ದು, ತಕ್ಷಣ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಕ್ಷಣ ಮಕ್ಕಳಿಗೆ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈವರೆಗೆ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಹುಳಗಳು ಪತ್ತೆಯಾಗಿರುವುದನ್ನು ನೋಡಿದ್ದೆವು. ಈಗ ಹಾವಿನ ಮರಿ ಪತ್ತೆಯಾಗಿದ್ದು, ಪೋಷಕರು ಬೆಚ್ಚಿ ಬಿದ್ದಿದ್ದಾರೆ.

