HomeBusinessBIG NEWS: ರಾಜ್ಯದಲ್ಲಿ 12500 ಉದ್ಯೋಗ ಸೃಷ್ಟಿಯ 63 ಯೋಜನೆಗೆ ಸರ್ಕಾರ ಅಸ್ತು

BIG NEWS: ರಾಜ್ಯದಲ್ಲಿ 12500 ಉದ್ಯೋಗ ಸೃಷ್ಟಿಯ 63 ಯೋಜನೆಗೆ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯದಲ್ಲಿ 12500 ಉದ್ಯೋಗ ಸೃಷ್ಟಿಸುವ 17182 ಕೋಟಿ ರೂ. ಬಂಡವಾಳ ಹೂಡಿಕೆಯ 63 ಯೋಜನೆಗಳಿಗೆ ಸರ್ಕಾರ ಅಸ್ತು ಎಂದಿದೆ.

ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ದಕ್ಷಿಣ ಕನ್ನಡ, ತುಮಕೂರು, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 1741 ಕೋಟಿ ರೂ. ಬಂಡವಾಳ ಹೂಡಿಕೆಯ 7219 ಉದ್ಯೋಗ ಸೃಷ್ಟಿಸುವ 60 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಹೆಚ್ಚುವರಿಯಾಗಿ 3 ಯೋಜನೆಗಳಿಗೆ ಅನುಮತಿ ನೀಡಲಾಗಿದೆ.

ಫೀಡ್ ಪ್ಲ್ಯಾಂಟ್, ಪ್ರಿ ಫ್ಯಾಬ್ರಿಕೇಟೆಡ್ ಮಾಡ್ಯುಲರ್, ಬಸ್ ಬಾಡಿ ಬಿಲ್ಡಿಂಗ್, ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ಬಿಡಿಭಾಗ ತಯಾರಿಕಾ ಘಟಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿ, ಒಟ್ಟು 15,441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ಸುಮಾರು 5,277 ಜನರಿಗೆ ಉದ್ಯೋಗ ಲಭ್ಯವಾಗಲಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10  ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.

ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2,406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3,000 ಕೋಟಿ ರೂ.  ಹೂಡಿಕೆಯಿಂದ 570 ಉದ್ಯೋಗ  ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3,020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5,495 ಕೋಟಿ ರೂ.  ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13,921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ  ಸೃಷ್ಟಿಯಾಗಲಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular