ಚನ್ನಪಟ್ಟಣ: ಟಾಟಾ ಏಸ್- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಸಂಬಂಧಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದ ಬಳಿ ನಡೆದಿದೆ.
ತಿಟ್ಟಮಾರನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಶಿವಲಿಂಗಯ್ಯ (57) ಮೃತರು. ಶಿವಲಿಂಗಯ್ಯ ಶಾಸಕ ಸಿ.ಪಿ.ಯೋಗೇಶ್ವರ್ ದೊಡ್ಡಪ್ಪನ ಮಗಳ ಪತಿ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಶಿವಲಿಂಗಯ್ಯ ಅವರ ತಲೆ ಹಾಗೂ ಕಾಲಿಗೆ ಗಂಭೀರವಾದ ಗಾಯಗಳಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.