ಬೆಂಗಳೂರು: ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಲ್ಲಿಮಾಕನಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಲೋಕೇಶ್ (25) ಹಾಗೂ ವಿಮಲ್ (27) ಮೃತ ದುರ್ದವಿಗಳು. ವಾಹನವೊಂದನ್ನು ಓವರ್ ಟೇಕ್ ಮಾಡುವ ಬರದಲ್ಲಿ ಎದುರಿನಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸಕೋಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.