ಬೆಂಗಳೂರು: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ರಸ್ತೆಪಾಳ್ಯ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಬಲಿಯಾಗಿದ್ದಾರೆ. ಕೇಶವ್ (19) ಹಾಗೂ ಮಯೂರ್ (19) ಮೃತ ದುರ್ದೈವಿಗಳು.
ಕದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
