HomeKarnatakaBREAKING NEWS: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ; ಪತಿ-ಪತ್ನಿ ಸ್ಥಳದಲ್ಲೇ ದುರ್ಮರಣ

BREAKING NEWS: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ; ಪತಿ-ಪತ್ನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಶ್ರೀಧರ್ (52) ಹಾಗೂ ಅರ್ಚನಾ (35) ಮೃತ ದಂಪತಿ. 6 ತಿಂಗಳ ಹಿಂದಿನಿಂದ ಯಂಟಗಾನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿಗೆ ಕಣ್ಣುಕಾಣುತ್ತಿರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೆಂದು ಇಬ್ಬರೂ ಕೈಕೈ ಹಿಡಿದು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ದಂಪತಿಗೆ ಡಿಕ್ಕಿಹೊಡೆದಿದೆ.

ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular