ದಾವಣಗೆರೆ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ನ್ಯಾಮತಿಯ ಮಾಲತೇಶ್ (25) ಹಾಗೂ ಕುದುರೆಕೊಂಡದ ಶೌರ್ಯ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಇಬ್ಬರು ಗಾಯಗಗೊಂಡಿದ್ದಾರೆ. ಗಾಯಾಳುಗಳನ್ನು ಮಂಜುಳಾ ಹಾಗೂ ಅನಿಲ್ ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.