ಗದಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಗದಗ ನಗರದ ಚನ್ನಮ್ಮ ವೃತ್ತದಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಬೈಕ್ ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.
ಅಮನ್ ರಿಯಾಜ್ (25), ಜುನೇದ್ (23) ಮೃತ ದುರ್ದೈವಿಗಳು. ಗದಗ ಸಂಚಾರ ಠಣೆಯಲ್ಲಿ ಪ್ರಕರಣ ದಾಖಲಾಗಿದೆ.