HomeKarnatakaBIG NEWS: ಭೀಕರ ಅಪಘಾತ; ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಹಿರಿಯ ವಕೀಲ ದುರ್ಮರಣ

BIG NEWS: ಭೀಕರ ಅಪಘಾತ; ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಹಿರಿಯ ವಕೀಲ ದುರ್ಮರಣ

ಬೆಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಹಿರೀಯ ವಕೀಲರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಕೆ.ಟಿ. ಡಾಕಪ್ಪ ಮೃತ ವಕೀಲ. ಡಾಕಪ್ಪ ಅವರು ಕಚೇರಿಯಿಂದ ಮನೆಗೆ ತೆರಳಲು ತಮ್ಮ ಕಾರು ನಿಲ್ಲಿಸಿದ್ದ ಜಾಗಕ್ಕೆ ನಡೆದು ಬರುತ್ತಿದ್ದಾಗ ವೇಗವಾಗಿ ಬಂದ ಕೆಟಿಎಂ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಡಾಕಪ್ಪ ಅವರ ತಲೆಗೆ ಗಂಭೀರವಾಗ ಗಾಯಗಳಾಗಿದ್ದವು.

ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಡಾಕಪ್ಪ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾಗಿದ್ದು, ಹೈಕೋರ್ಟ್ ಹಾಗೂ ಇತರ ನ್ಯಾಯಾಲಯಗಳಲ್ಲಿ ಹಿರಿಯ ವಕೀಲಯರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಅಪಘಾತದಲ್ಲಿ ಡಾಕಪ್ಪ ಅವರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ ಕಾರಿಗೂ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಸವಾರ ಆದಿತ್ಯ (21) ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಬಸವನಗುಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular