HomeKarnatakaಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪಲ್ಸರ್ ಬೈಕ್: ನಾಲ್ವರು ಸ್ಥಳದಲ್ಲೇ ದುರ್ಮರಣ

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪಲ್ಸರ್ ಬೈಕ್: ನಾಲ್ವರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ನಡೆದು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವಕರ ಗುಂಪು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ನಿಂಗರಾಜ್ ಚೌದರಿ ಎಂಬಾತ ವೇಗವಾಗಿ ಬೈಕ್ ನಲ್ಲಿ ಬಂದಿದ್ದು, ಬೈಕ್ ಯುವಕರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮೂವರು ಯುವಕರು ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಂಗರಾಜ್ ಚೌಧರಿ (22), ಅನಿಲ ಖೈನೂರ (23), ಕುಮಾರ ಪ್ಯಾಟಿ (18) ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೆಬಿಹಾಳ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular