HomeKarnatakaBREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಮ್ರಾನ್ (23) ಕಲಂ ಸಾಬ್ (19) ಮೃತ ದುರ್ದೈವಿಗಳು. ಗಾಯಗೊಂಡಿರುವ ಶೇಕ್ ಜೊಸಿಂಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಯುವಕರು ಬೈಕ್ ನಲ್ಲಿ ತೆಕ್ಕಲಕೋಟೆಯಿಂದ ಸಿರಗುಪ್ಪ ಕಡೆಗೆ ತೆರಳುತ್ತಿದ್ದರು. ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular