BIG NEWS: ಬೈಕ್ ಸ್ಕಿಡ್ ಆಗಿ ದುರಂತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಅನಾಹುತಗಳು ಸಂಭವಿಸುತ್ತಿವೆ. ವಾಹನ ಸವಾರರಂತು ಎಷ್ಟೇ ಜಾಗೃತಿಯಿಂದ ವಾಹನ ಚಲಾಯಿಸಿದರೂ ಕಡಿಮೆಯೇ. ಬೈಕ್ ಸವಾರರಿಬ್ಬರು ಬೈಕ್ ಸ್ಕಿಡ್ ಆಗಿ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡತ್ ಕ್ರಾಸ್ ನಲ್ಲಿ ಈ ದುರಂತ ಸಂಭವಿಸಿದೆ. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ವರ್ಕನಹಳ್ಳಿಯ ಯುವರಾಜ್ (23) ಹಾಗೂ ಶರಣಪ್ಪ (22) ಮೃತ ದುರ್ದೈವಿಗಳು. ಸುರಪುರದಿಂದ ವರ್ಕನಹಳ್ಳಿ ಗ್ರಾಮಕ್ಕೆ ಬರುವಾಗ ಈ ಘಟನೆ ನಡೆದಿದೆ. ಶಹಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read