HomeKarnatakaಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ದುರ್ಮರಣ

ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ದುರ್ಮರಣ

ದೇವನಹಳ್ಳಿ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ರಾಹುಲ್ (18) ಮೃತ ಯುವಕ. ಪಕ್ಕದಲ್ಲಿ ಬರುತ್ತಿದ್ದ ವಾಹನಕ್ಕೆ ಬುಲೆಟ್ ಬೈಕ್ ಟಚ್ ಆಗಿ ಬಳಿಕ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಏರ್ ಪೋರ್ಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಕೆಂಪೇಗೌಡ ಏರ್ ಪೋರ್ಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular