HomeKarnatakaBIG NEWS: ಬೈಕ್ ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಇಬ್ಬರು ದುರ್ಮರಣ

BIG NEWS: ಬೈಕ್ ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಇಬ್ಬರು ದುರ್ಮರಣ

ದಾವಣಗೆರೆ: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಏಕಾಏಕಿ ಮನೆಗೆ ನುಗ್ಗಿದ ಘಟನೆ ದಾವಣಗೆರೆ ಜಿಲ್ಲೆಯ ತರಳಬಾಳು ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಹದಡಿ ಗ್ರಮದ ರಾಜು (38) ಹಾಗೂ ರಾಮಪ್ಪ (40) ಮೃತರು. ಬೈಕ್ ನಲ್ಲಿ ಮದುವೆಗೆಂದು ತೆರಳುತ್ತಿದ್ದರು. ಈ ವೇಳೆ ಹದಡಿ ಗ್ರಮದಿಂದ ಚನ್ನಗಿರಿಯತ್ತ ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದದರೆ. ಬಳಿಕ ಬಸ್ ರಸ್ತೆ ಬದಿಯಲ್ಲಿದ್ದ ಮನೆಗೆ ನುಗ್ಗಿದೆ. ಮನೆಯ ಗೋಡೆ ಕುಸಿದು ಮನೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular