ಚಿಕ್ಕಬಳ್ಳಾಪುರ: ಭೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಪೋಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಎಂ.ಗುಂಡ್ಲಹಳ್ಳಿ ಗ್ರಾಮದ ಕೃಷ್ಣಪ್ಪ (30) ಹಾಗೂ ಹಳೆಬುದ್ಧಿವಂತನಹಳ್ಳಿ ಪ್ರಕಾಶ್ (24) ಮೃತ ದುರ್ದೈವಿಗಳು. ಇಬ್ಬರೂ ಚಿಕ್ಕಬಳ್ಳಾಪುರದ ಟೈಟಾನಿಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಎಂದಿನಂತೆ ಬೆಳಿಗ್ಗೆ ಕೆಲಸಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.