ಕಲಬುರಗಿ: ಬೈಕ್ ಗೆ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿಯಲ್ಲಿ ಇಬ್ಬರು ಸಜೀವದಹನವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ನಡೆದಿದೆ.
ಇಲ್ಲಿನ ಮಹಗಾಂವ್ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಜೀವದಹನವಾಗಿದ್ದಾರೆ.
ಆಕಾಶ್ ಧನವಂತ್ (19) ಹಾಗೂ ಸತೀಶ್ (28) ಮೃತರು. ಇಬ್ಬರೂ ಕಮಲಾಪುರದ ಸಿರಗಾಪುರ ನಿವಾಸಿಗಳು. ಮಹಾಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
