ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಅಪಘಾತ ಸಂಭವಿಸಿದ್ದು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ ದಾವಣಗೆರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
ಬೆಂಗಳೂರಿನಿಂದ ಕುಮಾರಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮಾರ್ಗಮಧ್ಯ ಮೂತ್ರ ವಿಸರ್ಜನೆಗಾಗಿ ಕಾರ್ ನಿಂದ ಇಳಿಯುವಾಗ ಅವರಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.