HomeKarnatakaBREAKING : ಬೈಕ್ ಡಿಕ್ಕಿ ಪ್ರಕರಣ : ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಡೆಪ್ಯೂಟಿ ಸ್ಪೀಕರ್ 'ರುದ್ರಪ್ಪ...

BREAKING : ಬೈಕ್ ಡಿಕ್ಕಿ ಪ್ರಕರಣ : ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಡೆಪ್ಯೂಟಿ ಸ್ಪೀಕರ್ ‘ರುದ್ರಪ್ಪ ಲಮಾಣಿ’ ಶಿಫ್ಟ್.!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಅಪಘಾತ ಸಂಭವಿಸಿದ್ದು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ರುದ್ರಪ್ಪ ಲಮಾಣಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ ದಾವಣಗೆರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಬೆಂಗಳೂರಿನಿಂದ ಕುಮಾರಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮಾರ್ಗಮಧ್ಯ ಮೂತ್ರ ವಿಸರ್ಜನೆಗಾಗಿ ಕಾರ್ ನಿಂದ ಇಳಿಯುವಾಗ ಅವರಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular