ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ರಸ್ತೆಬದಿ ನಿಲ್ಲಿಸಿಂದ ಬೈಕ್ ಗಳಿಗೆ, ಅಂಗಡಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ.
ಹಲಸೂರು ಬಳಿ ಇಂದು ಮುಂಜಾನೆ ರಸ್ತೆ ಬದಿ ನಿಂತಿದ್ದ 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಸ್ಥಳೀಯ ನಿವಾಸಿಗಳು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನದಿಸಿದ್ದಾರೆ. ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.