ಶಿವಮೊಗ್ಗ: ಶಾಲಾ ವಾಹನಕ್ಕೆ ಹಿಂಬದಿಯಿಂದ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ಸವಾರ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಘಟನೆ ನಡೆದಿದೆ.
ಖಾಸಗಿ ಶಿಕ್ಷಣ ಸಂಸ್ಥೆಯ ವಾಹನಕ್ಕೆ ಹಿಂಬದಿಯಿಂದ ಬೈಕ್ ನಲ್ಲಿ ಬಂದು ಗುದ್ದಿದ ಯುವಕ ಮೃತಪಟ್ಟಿದ್ದಾನೆ. ಶಿಕಾರಿಪುರದ ಆಶ್ರಯ ಬಡಾವಣೆಯ ನಿವಾಸಿ ವಿನಾಯಕ(36) ಮೃತಪಟ್ಟವರು. ಬೈಕ್ ಹಿಂಬದಿ ಸವಾರ ಮೋಹನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ ರಸ್ತೆಯ ಶಾಹಿ ಗಾರ್ಮೆಂಟ್ಸ್ ನಲ್ಲಿ ನಿತ್ಯದ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಅವಘಡ ಸಂಭವಿಸಿದೆ. ಮೃತ ವಿನಾಯಕ ಅವರಿಗೆ ಗರ್ಭಿಣಿ ಪತ್ನಿ, ತಂದೆ, ತಾಯಿ ಇದ್ದಾರೆ, ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
